ಚಾಮರಾಜನಗರ

ಎಲ್ಲಾ ಜಾತಿ, ಧರ್ಮದ ಬಡವರಿಗೆ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ : ಸಿ.ಎಂ

ಚಾಮರಾಜನಗರ : ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ ಎಂದರು.

ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಕರೆ ನೀಡಿದರು.

ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್ ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಸೇರಿ ನಮ್ಮ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡ ಮಹಿಳೆಯರಿಗೂ ಅನುಕೂಲ ಆಗುತ್ತಿದೆ. ಕೆಲಸಕ್ಕೆ ಹೋಗುವ ಬಡ ಮತ್ತು ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಇದರಿಂದ ಹೆಚ್ಚು ಸಮಾಧಾನ ಆಗಿದೆ. ವಿದ್ಯಾರ್ಥಿನಿಯರಿಗೂ ಸಮಾಧಾನ ಆಗಿದೆ. ಹೀಗೆ ಎಲ್ಲಾ ಜಾತಿಯ ಬಡವರು, ಮಧ್ಯಮ ವರ್ಗದವರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಸಾಮಾಜಿಕ ಸಮೀಕ್ಷೆ
ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ ಸಿಎಂ ಗಳು ಸ್ವೀಕರಿಸಿಲ್ಲ. ನಾನು ಸ್ವೀಕರಿಸಿ ಕ್ಯಾಬಿನೆಟ್ ಮುಂದೆ ಇಟ್ಟಿದ್ದೀನಿ. ಇದು ಯಾರ ವಿರುದ್ಧವೂ ಇರುವ ಸಮೀಕ್ಷೆ ಅಲ್ಲ. ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ ಮಾತ್ರ ಆಗಿದೆ ಎಂದರು.

ಬಿಜೆಪಿಯ ರಾಮಾ ಜೋಯಿಸ್ ಅವರು ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದರು. ನಿಮಗೆ ಸೈದ್ಧಾಂತಿಕವಾಗಿ ಸ್ಪಷ್ಟ ತಿಳಿವಳಿಕೆ ಇರಬೇಕು.

ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದರು.

ಚಾಮರಾಜನಗರ ಇಷ್ಟವಾದ ಜಿಲ್ಲೆ
ನನಗೆ ಚಾಮರಾಜನಗರ ಅತ್ಯಂತ ಇಷ್ಟವಾದ ಜಿಲ್ಲೆ. ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

21 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

21 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago