ಚಾಮರಾಜನಗರ

ಸಾರಿಗೆ ಬಸ್‌ ಡಿಕ್ಕಿ : ದಸಂಸ ಮುಖಂಡ ಸಾವು

ಚಾಮರಾಜನಗರ : ನಗರದಲ್ಲಿ ಸೋಮವಾರ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಾದ ದಸಂಸ ಜಿಲ್ಲಾ ಸಂಯೋಜಕ ಕೆಂಪನಪುರ ಕೆ.ಎಂ.ನಾಗರಾಜು ಮೃತಪಟ್ಟಿದ್ದಾರೆ.

ಸಂತೇಮರಹಳ್ಳಿ ಶ್ರೀ ರಾಮಚಂದ್ರ ಸಿಪಿಇಡಿ ಕಾಲೇಜು ಪ್ರಾಚಾರ್ಯರೂ ಆದ ತಾಲ್ಲೂಕಿನ ಕೆಂಪನಪುರ ಗ್ರಾಮದ ನಾಗರಾಜು(59) ಅವರು ಬೈಕ್‌ನಲ್ಲಿ (ಕೆಎ10 ವೈ 5676) ಬರುತ್ತಿದ್ದಾಗ ಸಾರಿಗೆ ಬಸ್ (ಕೆಎ10 ಎಫ್0132) ಸ್ಪರ್ಶಿಸಿದ್ದು ನಿಯಂತ್ರಣ ತಪ್ಪಿ ಬೈಕ್‌ನಿಂದ ಕೆಳಗಡೆ ಬಿದ್ದ ಅವರ ಮೇಲೆ ಬಸ್ ಹರಿದು ಬೆಳಿಗ್ಗೆ 9.45ರಲ್ಲಿ ಘಟನೆ ಸಂಭವಿಸಿದೆ. ತೀವ್ರ ರಕ್ತಸ್ರಾವವಾಗಿ ಬಿದ್ದ ಅವರನ್ನು ತಕ್ಷಣ ನಗರದ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಯಿತ್ತಾದರೂ ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದರು.

ಸಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಇಲ್ಲಿನ ಬುದ್ಧ ನಗರದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿತ್ತು. ಸಾರ್ವಜನಿಕರು ಅಂತಿಮ ದರ್ಶನ ಪಡೆದ ಬಳಿಕ ಸ್ವಗ್ರಾಮ ಕೆಂಪನಪುರಕ್ಕೆ ಮೃತದೇಹ ಕೊಂಡೊಯ್ದು ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಹೆಸರು ಮಾಡಿದ್ದ ಮೃತರು, ಕ್ರೀಡೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಜನಾನುರಾಗಿ ಹಾಗೂ ಉತ್ತಮ ಸಂಘಟಕರಾಗಿದ್ದರು. ದಲಿತ ಸಂಘರ್ಷ ಸಮಿತಿಯಲ್ಲಿ ದೀರ್ಘ ಕಾಲದಿಂದ ಗುರುತಿಸಿಕೊಂಡಿದ್ದರು.

ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ಆಪ್ತರಾಗಿದ್ದರು. ಇತ್ತೀಚೆಗೆ ಸ್ವಗ್ರಾಮ ಕೆಂಪನ ಪುರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಆಹ್ವಾನಿಸಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿದ್ದರು.

ಘಟನಾ ಸ್ಥಳಕ್ಕೆ ಸಂಚಾರ ಪೊಲೀಸ್ ಠಾಣೆ ಎಸ್‌ಐ ಹನುಮಂತ ಉಪ್ಪಾರ್,ಎಎಸ್‌ಐ ಲಿಂಗರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಚಾಲಕ ಮತ್ತು ಬಸ್ಸನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

5 mins ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

18 mins ago

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

52 mins ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

55 mins ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

1 hour ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

2 hours ago