ಚಾಮರಾಜನಗರ

ಬಸ್ ಕಾರು ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಕಾರು ಚಾಲಕ ಸಾವು

ಹನೂರು:- ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಧನಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ತಮಿಳುನಾಡಿನ ಕೊಯಮತ್ತೂರು ಮೂಲದ ವಿಘ್ನೇಶ್ ಮೃತ ವ್ಯಕ್ತಿ. ಈತ ಕಾರಿನಲ್ಲಿ ಕೊಳ್ಳೇಗಾಲ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದು ಮಳವಳ್ಳಿ ಕಡೆಯಿಂದ ಬಂದ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ (ಕೆಎ-10, ಎ-7653) ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ವಿಘ್ನೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಉಳಿದಂತೆ ಬಸ್‌ನ ಚಾಲಕ ರಮೇಶ್ ಹಾಗೂ ಬಸ್‌ನಲ್ಲಿದ್ದ ಕೊಳ್ಳೇಗಾಲ ತಾಲೂಕಿನ ಪಾಳ್ಯ ಮೂಲದ ಜಯರಾಮ್ ಎಂಬುವವರಿಗೆ ಗಾಯಗಳಾಗಿದ್ದು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳೀಯರ ಸಹಾಯದಿಂದ ಕಾರಿನಲ್ಲಿದ್ದ ಮೃತದೇಹವನ್ನು ಹೊರತೆಗೆದರು. ನಂತರ ಮೃತದೇಹವನ್ನು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

7 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

7 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

10 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

10 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

10 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

11 hours ago