ಹನೂರು : ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ತಾಳು ಬೆಟ್ಟದ ಪೆನ್ನಾಚಿ ಕ್ರಾಸ್ ನಲ್ಲಿ ಸಂಭವಿಸಿದೆ.
ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮದ ಪ್ರವೀಣ್ ಮೃತ ವ್ಯಕ್ತಿ. ಅಪಘಾತ ನಡೆದ ವೇಳೆ ಈತನಿಗೆ ತೀವ್ರವಾಗಿ ರಕ್ತಸ್ರಾವವಾಗಿತ್ತು. ಜತೆಗೆ ದೇಹದ ಇನ್ನಿತರ ಭಾಗದಲ್ಲೂ ಪೆಟ್ಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.