ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಸ್ ಚಾಲನೆ ಮಾಡುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಗುರುಸಿದ್ದು ಎಂಬುವವರೇ ಹೃದಯಾಘಾತದಿಂದ ಮೃತಪಟ್ಟಿರುವ ಚಾಲಕನಾಗಿದ್ದಾರೆ.
ಖಾಸಗಿ ಬಸ್ ಚಾಲಕರಾಗಿದ್ದ ಗುರುಸಿದ್ದುಗೆ ಬಸ್ ಓಡಿಸುತ್ತಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ ಮಾರ್ಗಮಧ್ಯೆಯೇ ಗುರುಸಿದ್ದು ಸಾವನ್ನಪ್ಪಿದ್ದಾರೆ. ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ.





