Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್‌ನಲ್ಲಿದ್ದ ೪-೫ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಮೈಸೂರು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ತಮಿಳುನಾಡು ನೋಂದಣಿಯ ಗೂಡ್ಸ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಘಟನೆಯಲ್ಲಿ ಲಾರಿ ಚಾಲಕನ ಕಾಲಿಗೆ ಗಾಯವಾಗಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ ೪-೫ ಜನರಿಗೆ ಗಾಯಗಳಾಗಿವೆ. ಬಸ್ ಚಾಲಕ ದಿಲೀಪ್ ಎಂಬವರ ಕಾಲು, ತಲೆಗೆ ಪೆಟ್ಟಾಗಿದೆ.

ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ಕಳಿಸಲಾಗಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!