ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್‌ನಲ್ಲಿದ್ದ ೪-೫ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಮೈಸೂರು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ತಮಿಳುನಾಡು ನೋಂದಣಿಯ ಗೂಡ್ಸ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆಯಲ್ಲಿ ಲಾರಿ ಚಾಲಕನ ಕಾಲಿಗೆ ಗಾಯವಾಗಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ ೪-೫ ಜನರಿಗೆ ಗಾಯಗಳಾಗಿವೆ. ಬಸ್ ಚಾಲಕ ದಿಲೀಪ್ ಎಂಬವರ ಕಾಲು, ತಲೆಗೆ ಪೆಟ್ಟಾಗಿದೆ.
ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ಕಳಿಸಲಾಗಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…