ಚಾಮರಾಜನಗರ: ಸರಿಯಾದ ಸಮಯಕ್ಕೆ ಬಸ್‌ಗಳು ಬಾರದ ಪರಿಣಾಮ ಶಾಲಾ ಮಕ್ಕಳು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಇರುವ ಆದರ್ಶ ವಿದ್ಯಾಲಯದ ಮಕ್ಕಳು ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ಪರದಾಟ ನಡೆಸುತ್ತಿದ್ದಾರೆ.
ಶಾಲೆ ಮುಗಿದರೂ ಬಸ್‌ಗಳು ಬಾರದ ಪರಿಣಾಮ ಮಕ್ಕಳು ಸುಮಾರು 1 ಗಂಟೆಗೂ ಅಧಿಕ ಸಮಯ ಶಾಲೆಯಲ್ಲೇ ಉಳಿಯುವಂತಾಗಿದೆ.ಈ ಹಿನ್ನೆಲೆಯಲ್ಲಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮಕ್ಕಳು ಹಾಗೂ ಪೋಷಕರು ಆಗ್ರಹಿಸಿದ್ದಾರೆ.





