ಚಾಮರಾಜನಗರ

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಶುಕ್ರವಾರ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ಕೊಳ್ಳೇಗಾಲ ಹಾಗೂ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ 50 ಜನ ಪ್ರಯಾಣಿಕರು ತೆರಳುತ್ತಿದ್ದರು. ತಾಳುಬೆಟ್ಟದ ಸಮೀಪದ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ಪಲ್ಟಿಯಾಗಿದೆ. ಇದರಿಂದ ಬಲಭಾಗದಲ್ಲಿ ಕುಳಿತಿದ್ದ 30ಕ್ಕೂ ಹೆಚ್ಚು ಜನರಿಗೆ ತಲೆ, ಕೈ ಕಾಲು ಹೊಟ್ಟೆ ಎದೆ, ಮೂಗು ಸೇರಿದಂತೆ ದೇಹದ ಹಲವು ಭಾಗಗಳಿಗೆ ಗಾಯಗಳಾಗಿದೆ.

ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೈಸೂರು ಮೂಲದ ಮುತ್ತು ಮಣಿ (40), ಬಸವರಾಜು (52) ಮೇಘನ (27) ರಾಜಶೇಖರ್ (39) ಶಿವರಾಜು (65) ಶೈಲಜಾ (50) ಸಿದ್ದ ಮಲ್ಲು (40) ಅವರು ಚಿಕಿತ್ಸೆ ಪಡೆದುಕೊಂಡರೆ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ವಾಹಕಿ ಪದ್ಮಾವತಿಗೆ ತಲೆಗೆ ತೀವ್ರ ಗಾಯವಾಗಿದ್ದು, ದ್ರಾಕ್ಷಾಯಿಣಿ ಮದುವನಹಳ್ಳಿ, ದ್ರಾಕ್ಷಾಯಿಣಿ ಮೈಸೂರು, ಮಧು ಮೈಸೂರು, ಸುಂದರಮ್ಮ ಸಿದ್ದಯ್ಯನಪುರ,ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ವರುಣ್ (10)ನಂಜನಗೂಡು,ಜಯಲಕ್ಷ್ಮಿ (71)ಟಿ. ನರಸೀಪುರ, ಪಲ್ಲವಿ (30)ನಂಜನಗೂಡು ವರು ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಗಾಯಗೊಂಡಿದ್ದವರನ್ನು ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ ಉಳಿದಂತೆ ಹೆಚ್ಚಿನ ಚಿಕಿತ್ಸೆಗೆ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆ ಹಾಗೂ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಆಂಬುಲೆನ್ಸ್ ಇಲ್ಲದೆ ಪರದಾಟ
ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ಸಾರ್ವಜನಿಕರು 108 ತುರ್ತು ಆಂಬುಲೆನ್ಸ್ ಗೆ ದೂರವಾಣಿ ಕರೆ ಮಾಡಿದ್ದಾರೆ ಆದರೆ ಯಾವುದೇ ಸ್ಪಂದನೆ ಸಿಗದೇ ಇರುವುದರಿಂದ ಪ್ರಜ್ಞಾವಂತ ನಾಗರಿಕರು ಆರೋಗ್ಯ ಇಲಾಖೆ ಅಧಿಕಾರಿಗಳ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂಆರ್ ಮಂಜುನಾಥ್ ರವರಿಗೆ ವಿಚಾರ ತಿಳಿಯುತ್ತಿದ್ದಂತೆ ಡಿಎಚ್ಒ ಡಾ. ಚಿದಂಬರ ಅವರ ಜೊತೆ ಮಾತನಾಡಿ ಮಲೆ ಮಹದೇಶ್ವರ ಬೆಟ್ಟದಲ್ಲಿನ ಎರಡು ಆಂಬುಲೆನ್ಸ್ ಗಳು 108 ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಿ ಗಾಯಾಳುಗಳಿಗೆ ಸ್ಪಂದಿಸಿದ್ದಾರೆ.

ಸಮಸ್ಯೆ ಬಗೆಹರಿಸುವಲ್ಲಿ ಡಿಎಚ್ಒ ವಿಫಲ
ಕಳೆದ ಒಂದು ವಾರದಲ್ಲಿ ನಾಲ್ಕು ಅಪಘಾತಗಳಾಗಿವೆ ಎಲ್ಲಾ ಅಪಘಾತದ ಸಂದರ್ಭಗಳಲ್ಲಿಯೂ ಸಮರ್ಪಕ ಆಂಬುಲೆನ್ಸ್ ವ್ಯವಸ್ಥೆ ಗಳು ಇನ್ನಿಲ್ಲದ ತೊಂದರೆ ಅನುಭವಿಸಿದ್ದಾರೆ.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಸಮರ್ಪಕ ಆರೋಗ್ಯ ಸೇವೆ ಸಿಗುತ್ತಿಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳು ಸಮರ್ಪಕವಾಗಿ ತಮ್ಮ ಕರ್ತವ್ಯ ನಿರ್ವಹಿಸದೆ ಇರುವುದರಿಂದ ತುರ್ತು ಸಂದರ್ಭಗಳಲ್ಲಿ ತೊಂದರೆಯಾಗುತ್ತಿದೆ. ಸಮಸ್ಯೆಯ ಬಗ್ಗೆ ಡಿಎಚ್ಓವರ ಜೊತೆ ದೂರವಾಣಿ ಕರೆ ಮಾಡಿದಾಗ ಹನೂರು,ಕೌದಳ್ಳಿ, ಪಿ ಜಿ ಪಾಳ್ಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಳು ಆಂಬುಲೆನ್ಸ್ ಗಳಿದೆ ಯಾವುದೇ ತೊಂದರೆ ಇಲ್ಲ ಎಂದು ಮಾಹಿತಿ ನೀಡುತ್ತಾರೆ. ಹಾಗಾದರೆ ತುರ್ತು ಸಂದರ್ಭಗಳಲ್ಲಿ ಏಳು ವಾಹನಗಳು ಎಲ್ಲಿ ಹೋಗುತ್ತದೆ ಎಂಬುದೇ ತಿಳಿದು ಬರುತ್ತಿಲ್ಲ ಇನ್ನು ಮುಂದಾದರು ಹಾರಿಕೆಯ ಉತ್ತರ ನೀಡುವ ಮೊದಲು ತಮ್ಮ ವ್ಯಾಪ್ತಿಯಲ್ಲಿ ಬರುವ ಆಂಬುಲೆನ್ಸ್ ಗಳನ್ನು ನಿಗದಿತ ಸಮಯಕ್ಕೆ ಕಳುಹಿಸಲು ತಮ್ಮ ಅಧೀನ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಬೇಕಿದೆ.

ಮಾನವೀಯತೆ ಮೆರೆದ ಸ್ಥಳೀಯರು
ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾಗಿ ಗಾಯಾಳುಗಳನ್ನು ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಾಗ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅನಿಲ್, ನಮ್ಮ ಕನ್ನಡಿಗರ ವಿಜಯ ಸೇನೆ , ಪೊನ್ನಾಚಿ ಸ್ನೇಹಜೀವಿ ರಾಜು, ಇನ್ನಿತರರು ಆಂಬುಲೆನ್ಸ್ ಸೇವೆ ಒದಗಿಸಲು ಹಾಗೂ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲು ಎಲ್ಲಾ ರೀತಿಯ ಸಹಕಾರ ನೀಡಿ ಮಾನವೀಯತೆ ಮೆರೆದಿದ್ದಾರೆ.

ಕಳೆದ ಒಂದು ವಾರದ ಅವಧಿಯಲ್ಲಿ ಕೋಣನಕೆರೆ ಸಮೀಪ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರರು ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಶುಕ್ರವಾರ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಅತಿ ವೇಗವೇ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕೆಎಸ್ಆರ್ಟಿಸಿ ನಿಗಮದ ಅಧಿಕಾರಿಗಳು ಚಾಲಕರಿಗೆ ಸಂಚಾರಿ ನಿಯಮದ ಬಗ್ಗೆ ಅರಿವು ಮೂಡಿಸುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ತಹಸಿಲ್ದಾರ್ ಬೇಟಿ
ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಹನೂರು ತಾಲೂಕು ದಂಡಾಧಿಕಾರಿ ಚೈತ್ರ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಟಿ ಹೆಚ್ ಓ ಡಾ. ಪ್ರಕಾಶ್ ಪ್ರಥಮ ಚಿಕಿತ್ಸೆ ನೀಡಿ ಸಂತೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

59 mins ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

3 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

3 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

7 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

12 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

12 hours ago