ಕೊಳ್ಳೇಗಾಲ: ಮಂಗಳವಾರ ಸಿದ್ದಯ್ಯನಪುರ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟಾಟಾ ಏಸ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಟಾ ಏಸ್ ಚಾಲಕ ದೊಡ್ಡಿಂದುವಾಡಿ ಗ್ರಾಮದ ಗೌತಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ.
ಮಂಗಳವಾರ ನಡೆದ ಅಪಘಾತದಲ್ಲಿ ಹಿರಿಯ ಪುತ್ರಿಯ ಕಾರ್ಯಕ್ಕೆ ತೆರಳಿ ಬರುತ್ತಿದ್ದ ತಾಯಿ ರಾಜಮ್ಮ, ಮಗಳು ಶ್ರುತಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಆಟೋದಲ್ಲಿದ್ದ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮೃತಪಟ್ಟ ಗೌತಮ್‌ರ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.