ಗುಂಡ್ಲುಪೇಟೆ: ಬಸ್ ಟಿಕೆಟ್ ವಿಚಾರವಾಗಿ ಪೊಲೀಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ನಡುವೆ ಮಾರಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಗುರುವಾರ(ಮೇ.30) ನಡೆದಿದೆ.
ಗುಂಡ್ಲುಪೇಟೆ ಡಿಪೋ ಕಂಡಕ್ಟರ್ ಲೋಕೇಶ್ ಹಾಗೂ ಮೈಸೂರು ಸಶಸ್ತ್ರ ಮೀಸಲು ಪಡೆಯ ಕೊಟ್ರೇಶ್ ನಡುವೆ ಜಗಳ ಏರ್ಪಟ್ಟಿದೆ. ಕೊಟ್ರೇಶ್ ಮತ್ತು ಕುಟುಂಬ ನಿನ್ನೆ ಗುಂಡ್ಲುಪೇಟೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ವಾಪಸಾಗುವ ವೇಳೆ ಕೊಟ್ರೇಶ್ ಚಿಕ್ಕಮ್ಮ ಹಿಂಬದಿ ಸೀಟಿನಲ್ಲಿ ಕುಳಿತಿದ್ದರು. ಅವರೇ ಕೊಟ್ರೇಶ್‌ಗೆ ಟಿಕೆಟ್ ಸಹಾ ಪಡೆದಿದ್ದಾರೆ. ಆದರೆ, ಇದು ತಿಳಿಯದ ಕೋಟ್ರೇಶ್ ತಾವು ಕುಡಾ ಟಿಕೆಟ್ ಪಡೆದಿದ್ದಾರೆ.
ಬಸ್‌ನಿಂದ ಇಳಿದ ಬಳಿಕ ಎರಡು ಟಿಕೆಟ್ ನೋಡಿ ಈ ಬಗ್ಗೆ ಕಂಡಕ್ಟರ್ ಬಳಿ ಪರಿಶೀಲಿಸಿದ್ದಾರೆ, ಪರಿಶೀಲನೆ ನಡೆಸುವ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರು ಸ್ಥಳದಲ್ಲೇ ಬಡಿದಾಡಿಕೊಂಡಿದ್ದಾರೆ.
ಸಿವಿಲ್ ಡ್ರೆಸ್‌ನಲ್ಲಿದ್ದ ಕಾಟ್ರೇಶ್‌ಗೆ ಸಾರಿಗೆ ಸಂಸ್ಥೆಯ ಇತರ ಚಾಲಕರು ಕಂಡಕ್ಟರ್ ಜತೆ ಸೇರಿ ಕೈ ಮಿಲಾಯಿಸಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಇಬ್ಬರು ದೂರು-ಪ್ರತಿದೂರು ನೀಡಿದ್ದಾರೆ.
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…