ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಏಪ್ರಿಲ್.24ರಂದು ಸಚಿವ ಸಂಪುಟ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹಳೆ ಮೈಸೂರು ಭಾಗಕ್ಕೆ ಹೆಚ್ಚಿನ ಗಮನ ಕೊಡುವ ನಿರೀಕ್ಷೆಯಿದ್ದ ಸಚಿವ ಸಂಪುಟ ಸಭೆಯನ್ನು ಕಳೆದ ಫೆಬ್ರವರಿ.15ರಂದೇ ನಡೆಸಲು ತೀರ್ಮಾನಿಸಲಾಗಿತ್ತು.
ಮತ್ತೆ ಕಾರಣಾಂತರಗಳಿಂದ ಫೆಬ್ರವರಿ.17ಕ್ಕೆ ಮುಂದೂಡಲಾಗಿತ್ತು. ಇದೀಗ ಏಪ್ರಿಲ್. 24ರಂದು ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಅಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ ವಿಚಾರ ತೀವ್ರ ಚರ್ಚೆಯಾಗಲಿದೆ ಎನ್ನಲಾಗಿದೆ.
ಇನ್ನು ಜಿಲ್ಲೆಯ ಜನರು ವಿಶೇಷ ಪ್ಯಾಕೇಜ್ ನಿರೀಕ್ಷೆ ಮಾಡುತ್ತಿದ್ದು, ಅಂದಿನ ದಿನ ಸಿಎಂ ಸಿದ್ದರಾಮಯ್ಯರಿಗೆ ಎಲ್ಲರೂ ಸೇರಿ ಮನವಿ ಮಾಡುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.





