ಚಾಮರಾಜನಗರ: ಜಿಲ್ಲೆಯ ಧಾರ್ಮಿಕ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಸ್ಥಳಿಯ ಶಾಸಕ ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಲೆ ಮಹದೇಶ್ವರ ಪ್ರತಿಮೆ ಇರುವ ಸ್ಥಳದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಿಲ್ಲಾಡಳಿತ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ ಸಕಲ ಸಿದ್ದತೆಗಳನ್ನು ಆರಂಭಿಸಿದೆ.
ಇಂದು (ಜ.3) ದೇವಾಲಯಕ್ಕೆ ಭೇಟಿ ನೀಡಿದ ಹನೂರು ಶಾಸಕ ಆರ್. ಮಂಜುನಾಥ್ ದೇವಾಲಯದ ಪ್ರಾಧಿಕಾರದ ಕಾರ್ಯದರ್ಶಿ ಇ. ರಘು ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಸಕಲ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದಾರೆ.
27 ವರ್ಷಗಳ ಹಿಂದೆ ಮೈಸೂರು ಜಿಲ್ಲೆಯಿಂದ ಬೇರ್ಪಟ್ಟ ಚಾಮರಾಜನಗರ ಜಿಲ್ಲೆಗೆ ಇನ್ನೂ ಪೂರ್ಣ ಪ್ರಮಾಣದ ಮೂಲ ಸೌಲಭ್ಯಗಳು ದೊರಕಿಲ್ಲ.
ಮೊದಲ ಬಾರಿಗೆ ಸಚಿವ ಸಂಪುಟ ಸಭೆಯು ಇಲ್ಲಿ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು ಎಲ್ಲರೂ ಆಗಮಿಸುತ್ತಿದ್ದಾರೆ. ಈ ಸಭೆಯು ಜಿಲ್ಲೆಯ ಅಭಿವೃದ್ದಿಗೆ ಪೂರಕವಾಗಲಿದೆ ಎಂದು ಸ್ಥಳಿಯ ಜನಪ್ರತಿನಿಧಿಗಳು ಹಾಗೂ ಜನತೆಗೆ ನಿರೀಕ್ಷೆಯಾಗಿದೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…