Mysore
26
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Cabinet Meeting ; ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೈಟ್ಸ್‌

cabinet committing in male mahadeshwara hills highlights

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಹೈಲೈಟ್ಸ್‌ಗಳು ಈ ಕೆಳಕಂಡಂತಿವೆ.

ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

* ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲಾ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

* 3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ.

* PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳ ಅಭಿವೃದ್ಧಿ.

* 1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.

* ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.

* ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್‌ಗಳ ಜಿಲ್ಲಾಸ್ಪತ್ರೆ.

* ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.

* ಹನೂರಿನಲ್ಲಿ ಹೊಸ ತಾಲ್ಲೂಕು ಆಸ್ಪತ್ರೆ, ತಾಲ್ಲೂಕು ಭವನ ನಿರ್ಮಾಣ.

* ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.

* ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ.

* 40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.

* ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.

* ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.

* ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.

* ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ.

* ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.

* ಒಟ್ಟಾಗಿ 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ.

Tags:
error: Content is protected !!