Mysore
18
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಚಾಮರಾಜನಗರ: ಫಲಾನುಭವಿಗಳ ಸಮಾವೇಶ ಹಾಗೂ ಸಚಿವ ಸಂಪುಟ ಸಭೆ ಮುಂದೂಡಿಕೆ

ಚಾಮರಾಜನಗರ: ಫೆಬ್ರವರಿ.17ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಕಾರಣಾಂತರಗಳಿಂದ ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇದೇ ಫೆಬ್ರವರಿ.16ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲೆಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಮತ್ತು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ನಿಗದಿಯಾಗಿತ್ತು. ಹಾಗೂ ಫೆಬ್ರವರಿ.17ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲು ತೀರ್ಮಾನ ಮಾಡಲಾಗಿತ್ತು. ಆದರೆ ಇವೆರಡು ಕಾರ್ಯಕ್ರಮಗಳನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಈ ಕಾರ್ಯಕ್ರಮಗಳು ನಡೆಯುವ ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.

Tags:
error: Content is protected !!