ಚಾಮರಾಜನಗರ: ಫೆಬ್ರವರಿ.17ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಕಾರಣಾಂತರಗಳಿಂದ ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇದೇ ಫೆಬ್ರವರಿ.16ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲೆಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಮತ್ತು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ನಿಗದಿಯಾಗಿತ್ತು. ಹಾಗೂ ಫೆಬ್ರವರಿ.17ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲು ತೀರ್ಮಾನ ಮಾಡಲಾಗಿತ್ತು. ಆದರೆ ಇವೆರಡು ಕಾರ್ಯಕ್ರಮಗಳನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಈ ಕಾರ್ಯಕ್ರಮಗಳು ನಡೆಯುವ ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…