ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.
ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಗುಂಡ್ಲುಪೇಟೆ ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಕೆ.ಎ.02 ಎಂ ಎಕ್ಸ್ 0555 ರೇಂಜ್ ರೋವರ್ ಕಾರ್ ಗೇ ಕೇರಳ ಕಡೆಯಿಂದ ಬರುತ್ತಿದ್ದ ಕೆ ಎಲ್ 45 ಎಫ್ 1023 ಕಾರು ಡಿಕ್ಕಿಯಾದ ಪರಿಣಾಮ ಎರಡು ಕಾರಿನ ಮುಂಭಾಗ ಹಾನಿಯಾಗಿದೆ. ಅಪಘಾತದಲ್ಲಿ ಕೇರಳ ಮೂಲದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಗುಂಡ್ಲುಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





