ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟ ರಸ್ತೆಯ ಮಲ್ಲಯ್ಯನಪುರದ ಬಳಿ ಭಾನುವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಪಟ್ಟಣದಿಂದ ಮಹದೇಶ್ವರ ಬೆಟ್ಟದತ್ತ ಸಾಗುತ್ತಿದ್ದ ಕೆಎ ೧೦ ಎಫ್ ೦೨೮೭ ನಂಬರಿನ ಕೆಎಸ್‌ಆರ್ ಟಿಸಿ ಬಸ್ ಮತ್ತು ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎ ೦೫ ಎಸಿ ೩೬೧೪ ಸಂಖ್ಯೆಯ ಇನೋವಾ ಕಾರಿನ ನಡುವೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಮನೋಜ್ ಎಂಬವರಿಗೆ ಗಾಯವಾಗಿದ್ದು, ಸ್ಥಳೀಯರು ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದಾರೆ.
ಇದನ್ನೂ ಓದಿ: ಅಪಘಾತ : ಇಬ್ಬರಿಗೆ ಗಂಭೀರ ಗಾಯ
ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ ಇತರರು ಅಪಾಯದಿಂದ ಪಾರಾಗಿದ್ದಾರೆ.
ಘಟನೆ ಸಂಭವಿಸಿದ ನಂತರ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸಂಚಾರ ವ್ಯವಸ್ಥೆ ಸರಿಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.





