ಬೇಗೂರು: ರಾಘವಾಪುರ ಮತ್ತು ಹಳ್ಳದ ಮಾದಳ್ಳಿ ಗೇಟ್ ನ ಮಧ್ಯದಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಘವಾಪುರ ಗ್ರಾಮದ ನಾಗಶೆಟ್ಟಿ (40) ಎಂಬುವರು ಬೈಕ್‌ನಲ್ಲಿ ಬೇಗೂರು ಕಡೆ ಹೋಗುತ್ತಿದ್ದಾಗ, ಎದುರುಗಡೆಯಿಂದ ಕಾರ್ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ನಾಗಶೆಟ್ಟಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದ್ದು, ಕಾರಿನಲ್ಲಿದ್ದ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬೇಗೂರು ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ಮಾಡಿ
ಮೃತ ದೇಹವನ್ನು ಬೇಗೂರು ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.