ಹನೂರು : ಪಟ್ಟಣದ ಹೊರವಲಯದಲ್ಲಿರುವ ಎಲ್ಲೇಮಾಳ ರಸ್ತೆಯಲ್ಲಿ ಕಾರು ರಸ್ತೆಬದಿಯ ಹುಣಸೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಕಡೆಯಿಂದ ಹನೂರಿನತ್ತ ಬರುತ್ತಿದ್ದ (ಕೆಎ ೪೧ ಬಿ ೮೨೯೬) ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನ ಚಾಲಕ ಬೆಂಗಳೂರು ಮೂಲದ ಕೆಂಗೇರಿ ನಿವಾಸಿ ಸಿದ್ದರಾಜು (೩೯), ಸಹಪ್ರಯಾಣಿಕರಾದ ಮೂಗೂರು ಮೋಳೆ ಗ್ರಾಮದ ಚಿಕ್ಕಣ್ಣ (೪೦), ರೇವಣ್ಣ (೫೦) ಎಂಬ ಮೂವರಿಗೆ ಪೆಟ್ಟಾಗಿದೆ. ಅವರನ್ನು ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹನೂರು ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…
ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…
ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…
ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…
ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…