car crash
ಹನೂರು: ಪವಾಡ ಪುರುಷ ನೆಲೆಸಿರುವ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಯ್ಯನಪುರ ಗ್ರಾಮದ ಮುಖ್ಯ ರಸ್ತೆಯ ಮನೆಯೊಳಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಹಾನಿಯಾಗಿರುವ ಘಟನೆ ಜರುಗಿದೆ.
ಮೈಸೂರು ಮೂಲದ ಕುಟುಂಬದವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಮಲ್ಲಯ್ಯನಪುರ ಗ್ರಾಮದ ಬಳಿ ತೆರಳುತ್ತಿದ್ದಾಗ ರಸ್ತೆಯ ಮಾರ್ಗದಲ್ಲಿ ಬಂದ ಹಸುವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸತೀಶ್ ಎಂಬುವವರ ಮನೆಯ ಮುಂಭಾಗಕ್ಕೆ ನುಗ್ಗಿದೆ.
ಪರಿಣಾಮ ಮನೆಯ ಮುಂಭಾಗ ಅಳವಡಿಸಿದ್ದ ಸೀಟ್ ಹಾಗೂ ಕೆಲವು ಪರಿಕರಗಳು ಹಾನಿಗೊಳಲಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ನಾಮಫಲಕ ಅಳವಡಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಇತ್ತೀಚಿನ ದಿನಗಳಲ್ಲಿ ಲಕ್ಷಾಂತರ ಭಕ್ತಾದಿಗಳು ತಮ್ಮ ಕಾರು, ದ್ವಿಚಕ್ರ ವಾಹನ, ಟೆಂಪೋ ಸೇರಿದಂತೆ ಬಸ್‌ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಹನೂರು ಪಟ್ಟಣದಿಂದ ಮಲೆ ಮಹದೇಶ್ವರ ಬೆಟ್ಟದವರೆಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೀವ್ರ ತಿರುವು ಹಾಗೂ ಪ್ರಮುಖ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ನಾಮಫಲಕಗಳನ್ನು ಅಳವಡಿಸದೇ ಇರುವುದರಿಂದ ಹೊಸದಾಗಿ ಬರುವ ಚಾಲಕರಿಗೆ ರಸ್ತೆಯ ಬಗ್ಗೆ ಅರಿವಿರುವುದಿಲ್ಲ. ಪರಿಣಾಮ ಆಗಾಗ ಅಪಘಾತವಾಗುತ್ತಿದೆ. ಮುಂದಿನ ದಿನಗಳಲ್ಲಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಾಮಫಲಕ ಅಳವಡಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…