ಚಾಮರಾಜನಗರ: ಏಕಾಏಕಿ ಕಾರು ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಸಮೀಪ ನಡೆದಿದೆ.
ಕಾರಿನಲ್ಲಿದ್ದ ಲಕ್ಕೂರು ಗ್ರಾಮದ ಗಣೇಶ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಕೂರಿನಿಂದ ಗುಂಡ್ಲುಪೇಟೆ ಕಡೆಗೆ ಹೋಗುವ ವೇಳೆ ಉಡಿಗಾಲ ಬಳಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಕಾರೇ ಹೊತ್ತಿ ಉರಿದಿದೆ. ಕೆಲವೇ ನಿಮಿಷಗಳಲ್ಲಿ ಕಾರು ಸುಟ್ಟು ಭಸ್ಮವಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಕಾರು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ.





