ಹನೂರು: ತಾಲ್ಲೂಕಿನ ಬೂದುಬಾಳು ಗ್ರಾಮದಲ್ಲಿ ನಡೆದ ಪಲ್ಲಕ್ಕಿ ಉತ್ಸವದ ವೇಳೆ ಕುಣಿಯುವಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ನಿಂದನೆ ಮಾಡಿದ್ದ ನಾಲ್ವರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಹನೂರು ತಾಲ್ಲೂಕಿನ ಬೂದಬಾಳು ಗ್ರಾಮದ ಆಕಾಶ್, ಮನೋಜ್, ಶ್ರೀನಿವಾಸ್, ಕಾರ್ತಿಕ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.
ಘಟನೆ ವಿವರ: ಬೂದುಬಾಳು ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವ ಸಂಬಂಧ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಬೂದುಬಾಳು ಗ್ರಾಮದ ದೊಡ್ಡಕೆರೆಯವರೆಗೆ ಪಲ್ಲಕ್ಕಿ ಉತ್ಸವ ತರುವ ವೇಳೆ ಸಾಂಪ್ರದಾಯದಂತೆ ನಾನು ನನ್ನ ಅಣ್ಣ ಹಾಗೂ ಸ್ನೇಹಿತರು ಕುಣಿದುಕೊಂಡು ಬರುತ್ತಿದ್ದಾಗ ನಮ್ಮಗಳ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚಂದು ಎಂಬುವವರು ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಬ್ ಇನ್ಸ್‌ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಅವರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…