ಚಾಮರಾಜನಗರ : ತಾಲ್ಲೂಕಿನ ದೊಳ್ಳೀಪುರ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಗೃಹಿಣಿಯನ್ನು ಆಯುಧದಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದ್ದು ಸೋಮವಾರ ಬೆಳಗಿನ ಜಾವ ವಿಚಾರ ಗೊತ್ತಾಗಿದೆ. ಆಕೆಯ ಗಂಡನೇ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಶೋಭಾ ಬಿ.ಆರ್. ಕೊಲೆಗೀಡಾದವರು. ತಲೆ, ಮುಖದ ಭಾಗಕ್ಕೆ ಆಯುಧದಿಂದ ಬಲವಾಗಿ ಹೊಡೆಯಲಾಗಿದೆ. ಶೋಭಾ ಅವರನ್ನು ಆಕೆಯ ಪತಿ ಮಹೇಶ (೪೫) ಕೊಲೆ ಮಾಡಿರುವುದಾಗಿ ಮೃತರ ಕಡೆಯವರು ಶಂಕೆ ವ್ಯಕ್ತಪಡಿಸಿದ್ದಾರೆ.
ಶೋಭಾ ಮೂಲತಃ ಬೆಂಗಳೂರಿನವರು. ಮಹೇಶ ಮತ್ತು ಅವನ ತಾಯಿ ಭಾರತಿ ಸೇರಿ ಕೊಲೆ ಮಾಡಿರುವ ಅನುಮಾನದ ಮೇಲೆ ಠಾಣೆಗೆ ದೂರು ನೀಡಿದ್ದಾರೆ.
ಶೋಭಾ ಕೊಲೆಯಾಗಿದೆ ಎಂದು ಮಹೇಶನೇ ಬೆಳಿಗ್ಗೆ ಕರೆ ಮಾಡಿ ತಿಳಿಸಿದ. ಅವನು ಸಾಲ ಮಾಡಿಕೊಂಡಿದ್ದ. ತವರು ಮನೆಯಿಂದ ಹಣ ತರುವಂತೆ ಪದೇ ಪದೇ ಪೀಡಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರ ಪೂರ್ವ ಠಾಣೆ ಪೊಲೀಸರು ಮಹೇಶ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ. ಮೃತರಿಗೆ ೧೬ವರ್ಷದ ಮಗ ಇದ್ದಾನೆ. ಅವನು ಹೊರ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಮೃತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.
ಘಟನಾ ಸ್ಥಳಕ್ಕೆ ಎಸ್ಪಿ ಡಾ.ಕವಿತಾ, ಎಎಸ್ಪಿ ಶಶಿಧರ್, ಡಿವೈಎಸ್ಪಿ ಲಕ್ಷ್ಮಯ್ಯ, ಇನ್ಸ್ ಪೆಕ್ಟರ್ ನವೀನ್, ಎಎಸ್‌ಐ ಮಹದೇವು ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು. ಘಟನೆ ಸಂಬಂಧ ವಿಚಾರಣೆ ಮುಂದುವರಿದಿದೆ.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…