ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4 ಸಾವಿರ ಕೋಳಿಗಳು ಸುಟ್ಟು ಹೋಗಿವೆ. ಈ ಅಗ್ನಿ ಅನಾಹುತದಿಂದ ಸುಮಾರು 25 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಫಾರಂ ಮಾಲೀಕರು ತಿಳಿಸಿದ್ದಾರೆ.
ದೇವರಾಜಪುರ ಗ್ರಾಮದ ಪ್ರದೀಪ್ ಕುಮಾರ್ ಅವರಿಗೆ ಸೇರಿದ ಕೋಳಿ ಫಾರಂನಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ತಮ್ಮ ಜಮೀನಿನಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದ ಪ್ರದೀಪ್ ಕುಮಾರ್ ಅವರು ಎರಡು ಶೆಡ್‌ಗಳನ್ನು ನಿರ್ಮಿಸಿ ಸಾವಿರಾರು ಕೋಳಿಗಳನ್ನು ಸಾಕಾಣಿಕೆ ಮಾಡಿದ್ದರು.
ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಶೆಡ್‌ಗೆ ಬೆಂಕಿ ತಗುಲಿದ್ದು, ಬೆಂಕಿ ತ್ವರಿತವಾಗಿ ಹರಡಿ ಶೆಡ್ ಸಂಪೂರ್ಣವಾಗಿ ನಾಶವಾಗಿದೆ. ಸ್ಥಳಕ್ಕೆ ತ್ವರಿತವಾಗಿ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಈ ಸಂಬಂಧ ಚಾಮರಾಜನಗರ ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…