ಚಾಮರಾಜನಗರ : ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನ ಹೆಚ್ಚಳ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ ಒತ್ತಾಯಿಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಳೆದ ಜನವರಿಯಲ್ಲಿ ಆಶಾ ಕಾರ್ಯಕರ್ತೆಯರು 3 ದಿನಗಳ ಕಾಲ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದೇವು ಬೇಡಿಕೆಯನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಎರಡು ತಿಂಗಳಾದರೂ ಈ ಸಂಬಂಧ ಯಾವುದೇ ಅಧಿಕೃತ ಆದೇಶ ಪತ್ರ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಉಮಾದೇವಿ ಮಾತನಾಡಿದರು.
ಸುದ್ಧಿಗೋಷ್ಠಿಯಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಚೆನ್ನಾಜಮ್ಮ, ಉಪಾಧ್ಯಕ್ಷೆ ಜಯಲಕ್ಷ್ಮಿ, ಸುವರ್ಣ, ಶಶಿಕಲಾ, ಭಾಗ್ಯ, ಅಶ್ವಿನಿ ಹಾಜರಿದ್ದರು.