ಚಾಮರಾಜನಗರ : ಜಿಲ್ಲೆಯ ಜೀತ ವಿಮುಕ್ತರ ಸಾಮಾಜಿಕ ಸ್ಥಿತಿ-ಗತಿ ಪರಿಶೀಲಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ೨೫೩ ಮಂದಿ ಜೀತ ವಿಮುಕ್ತರಿದ್ದು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಜೀತ ವಿಮುಕ್ತರ ಪೈಕಿ ಕೆಲವರು ಮರಣ ಹೊಂದಿದ್ದಾರೆ. ಉಳಿದವರಿಗೆ ಇನ್ನೂ ಗುರುತಿನ ಚೀಟಿ, ಬಿಡುಗಡೆ ಪತ್ರ ನೀಡಿಲ್ಲ. ಜಮೀನು ನೀಡಲು ಗಡಿ ಗುರುತಿಸಬೇಕು ಎಂದರು.
ಕಳೆದ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ತುರ್ತಾಗಿ ಕ್ರಮ ವಹಿಸುವಂತೆ ಸೂಚಿಸಲಾಗಿದ್ದು, ಭೂಮಿ ಲಭ್ಯವಿಲ್ಲದಿದ್ದರೆ ಉಪವಿಭಾಗಾಧಿಕಾರಿ ಹಂತದಲ್ಲಿ ದರ ನಿಗದಿಪಡಿಸಿ ಭೂ ಒಡೆತನದಡಿ ಜಮೀನು ಖರೀದಿಸಿ ಹಂಚಿಕೆ ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ:-ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ
ಜೀತವಿಮುಕ್ತರಿಗೆ ಮಂಜೂರಾಗಿರುವ ಜಮೀನುಗಳು ಬೇರೆ ವ್ಯಕ್ತಿಗಳ ಸ್ವಾಽನದಲ್ಲಿದ್ದರೆ ತೆರವುಗೊಳಿಸುವ ಪ್ರಕ್ರಿಯೆ ಶೀಘ್ರ ಆಗಬೇಕು. ಹಕ್ಕುಪತ್ರ ವಿತರಣೆ ಮಾಡಬೇಕು. ಅ.೧೩ರ ಮುಂದಿನ ಸಭೆಯೊಳಗೆ ಈ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಜೀತವಿಮುಕ್ತರಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಸಂಬಂಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ, ಉಪವಿಭಾಗಾಽಕಾರಿ ದಿನೇಶ್‌ಕುಮಾರ್ ಮೀನಾ, ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಅರಕಲವಾಡಿ ನಾಗೇಂದ್ರ, ರಮೇಶ್ ಪ್ರಭು, ವೃಷಭೇಂದ್ರ, ನಟರಾಜು ಮಾಳಿಗೆ, ಸಿದ್ದರಾಜು, ಕೇತಮ್ಮ, ರಜನಿ ಕೆ.ತಿವಾರಿ, ಅರ್ಪಿತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಽಕಾರಿ ಬಿಂದ್ಯಾ, ಜಿಪಂ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಮೊದಲಾದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…