ಚಾಮರಾಜನಗರ: ವಿವಿಧ ಜಾನಪದ ಕಲಾತಂಡಗಳು, ಅದ್ದೂರಿ ಮೆರವಣಿಗೆಗಳು, ಸ್ಥಬ್ದ ಚಿತ್ರಗಳು, ಎತ್ತಿನ ಗಾಡಿ ಮೆರವಣಿಗೆ, ಸಿರಿಧಾನ್ಯದ ಮಹತ್ವ ತಿಳಿಸಿದ ಅಧಿಕಾರಿಗಳು. ರೈತ ದಸರಾ ಯಶಸ್ಸಿಗೆ ಇವೆಲ್ಲವೂ ಸಾಕ್ಷಿಯಾದವು.
ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ದಸರಾ ಉಪಸಮಿತಿಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸ್ವತಃ ಎತ್ತಿನ ಗಾಡಿ ಚಲಿಸುವ ಮೂಲಕ ರೈತ ದಸರಾಗೆ ಚಾಲನೆ ನೀಡಿದರು.
ಆಕರ್ಷಕ ಜಾನಪದ ಕಲಾತಂಡಗಳು, ಅಲಂಕೃತ ಎತ್ತಿನ ಗಾಡಿಗಳು, ಕೃಷಿ ಸಂಬಂಧಿತ ಇಲಾಖೆಗಳ ಸ್ತಬ್ದಚಿತ್ರಗಳಿಂದ ಅದ್ದೂರಿ ಮೆರವಣಿಗೆ ನಡೆಯಿತು.
ಗಮನ ಸೆಳೆದ ಎತ್ತಿನಗಾಡಿ
ಡೊಳ್ಳು ಕುಣಿತ, ಬ್ಯಾಂಡ್ ಸೆಟ್, ವೀರಗಾಸೆ, ಗೊರವರ ಕುಣಿತ, ಹುಲಿವೇಷ, ಕಂಸಾಳೆ ಕಲಾವಿದರ ತಂಡಗಳು ಮೆರವಣಿಗೆಗೆ ಆಕರ್ಷಕ ಮೆರುಗು ನೀಡಿದವು. ಕಬ್ಬು, ಬಾಳೆ, ತಳಿರು, ತೋರಣಗಳಿಂದ ಅಲಂಕೃತಗೊಂಡಿದ್ದ ಎತ್ತಿನ ಗಾಡಿಗಳು ಮೆರವಣಿಗೆಯಲ್ಲಿ ಗಮನ ಸೆಳೆದವು. ಅಲ್ಲದೆ ಕೃಷಿ ಸಂಬಂಧಿತ ವಿವಿಧ ಇಲಾಖೆಗಳಾದ ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ ಇಲಾಖೆಗಳ ಸ್ತಬ್ದಚಿತ್ರಗಳು ಮೆರವಣಿಗೆಯ ಅಂದ ಹೆಚ್ಚಿಸಿದವು.
ಮೆರವಣಿಗೆಯು ಶ್ರೀಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ, ಜಿಲ್ಲಾಡಳಿತ ಭವನ ಸಾಗಿ ಪ್ರವಾಸಿ ಮಾರ್ಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅಂತ್ಯವಾಯಿತು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಬೀದ್, ಉಪನಿರ್ದೇಶಕರಾದ ಸುಷ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉದಯ್‌ಕುಮಾರ್, ಅಧಿಕಾರಿಗಳು, ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ಇತರೆ ರೈತ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…