ಚಾಮರಾಜನಗರ

ಚಾ.ನಗರ | ವಾಟರ್‌ ಮ್ಯಾನ್ ಆತ್ಮಹತ್ಯೆಗೆ ಸಚಿವ‌ ಪ್ರಿಯಾಂಕ್‌ ಖರ್ಗೆ ನೇರ ಹೊಣೆ : ಎನ್.ಮಹೇಶ್

ಚಾಮರಾಜನಗರ : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿ ನೀರುಗಂಟಿ ಚಿಕ್ಕೂಸನಾಯಕ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನೇರ ಹೊಣೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಆಪಾದಿಸಿದರು.

ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಮೃತ ಚಿಕ್ಕೂಸನಾಯಕ ಅವರ ಅಂತಿಮದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯತ್ ರಾಜ್ ಇಲಾಖೆ ಲೋಪದೋಷವನ್ನು ಸರಿಪಡಿಸುವುದಲ್ಲಿ ಪ್ರಿಯಾಂಕ್ ಆಸಕ್ತಿ ತೋರುತ್ತಿಲ್ಲ. ಪರಿಣಾಮವಾಗಿ ಆತ್ಮಹತ್ಯೆ ಪ್ರಕರಣಗಳು ಸಂಭವಿಸುತ್ತಿವೆ ಎಂದರು.

ಇದನ್ನು ಓದಿ: ಸಂಬಳ ನೀಡದಕ್ಕೆ ಮನನೊಂದು ವಾಟರ್‌ ಮ್ಯಾನ್‌ ಆತ್ಮಹತ್ಯೆ ; ಹೊಂಗನೂರು ಗ್ರಾಪಂ ಕಚೇರಿಯಲ್ಲಿ ಘಟನೆ

ಗ್ರಾ.ಪಂ. ನೌಕರರಿಗೆ ಸಂಬಳ ಇತರೇ ಸೌಲಭ್ಯಗಳನ್ನು ಕಲ್ಪಿಸುವ ಬದಲು ಪ್ರಿಯಾಂಕ್ ಖರ್ಗೆ ಪ್ರತಿ ದಿನ ಆರ್‌ಎಸ್‌ಎಸ್ ಜಪ ಮಾಡುತ್ತಿದ್ದು, ಇಲಾಖೆ ಕೆಲಸದ ನಿರ್ಲಕ್ಷ್ಯದ ಪರಿಣಾಮವಾಗಿ ಹೊಂಗನೂರು ಗ್ರಾ.ಪಂ. ನೌಕರ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

ಆತ್ಮಹತ್ಯೆಯಂತಹ ಇಂತಹ ಅನೇಕ ಪ್ರಕರಣಗಳು ರಾಜ್ಯಾದ್ಯಂತ ಅಲ್ಲಲ್ಲಿ ನಡೆಯುತ್ತಲೇ ಇವೆ. ಇದಕ್ಕೆ ಸಚಿವರ ಅಸಮರ್ಥ ಆಡಳಿತ ಮೂಲ ಕಾರಣವಾಗಿದೆ. ಮೃತ ಚಿಕ್ಕೂಸನಾಯಕ ಅವರ ಕುಟುಂಬಕ್ಕೆ ಕನಿಷ್ಠ ೫೦ ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಜಯಸುಂದರ್, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

3 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

3 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

4 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

5 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

10 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

11 hours ago