ಚಾಮರಾಜನಗರ : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮ ಪಂಚಾಯಿತಿ ಪಿಡಿಒ ಆರ್. ಮಹೇಶ್ ಮತ್ತು ಇದೇ ಪಂಚಾಯಿತಿಯಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಕೊತ್ತಲವಾಡಿಯಲ್ಲಿ ಗ್ರೇಡ್-೧ ಕಾರ್ಯದರ್ಶಿ ಆಗಿರುವ ಎಲ್. ರಾಜೇಂದ್ರ ಪ್ರಸಾದ್ ಅವರನ್ನು ಅಮಾನತುಗೊಳಿಸಲಾಗಿದೆ.
೧-೪-೨೦೨೨ ರಿಂದ ೨೫-೫-೨೩ರವರೆಗೆ, ೫-೩-೨೪ ರಿಂದ ೩೧-೩-೨೪ರ ಅವಧಿಯಲ್ಲಿನ ಲೆಕ್ಕ ಪರಿಶೋಧನೆಯಲ್ಲಿ ಕಂಡುಬಂದಿರುವ ಲೋಪಗಳ ಹಿನ್ನೆಲೆಯಲ್ಲಿ ಮಹೇಶ್ ಅವರನ್ನು ಅಮಾನತುಗೊಳಿಸಲಾಗಿದೆ. ಇದೇ ರೀತಿ ರಾಜೇಂದ್ರ ಪ್ರಸಾದ್ ಅವರು ಸದರಿ ಪಂಚಾಯಿತಿಯಲ್ಲಿ ೨೬-೫-೨೩ ರಿಂದ ೪-೩-೨೪ರವರೆಗೆ ಪ್ರಭಾರ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿನ ಲೆಕ್ಕ ಪರಿಶೋಧನಾ ಸಂದರ್ಭದಲ್ಲಿ ಕಂಡು ಬಂದಿರುವ ಲೋಪಗಳ ಮೇರೆಗೆ ಅವರನ್ನು ಸಹ ಅಮಾನತುಗೊಳಿಸಲಾಗಿದೆ ಎಂದು ಜಿ ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತಮ್ಮ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.





