ಚಾಮರಾಜನಗರ

ಚಾ.ನಗರ | ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಗುರುವಾರ ಮನುಸ್ಮೃತಿಯ ಪ್ರತಿಯನ್ನು ಹರಿದು ಪ್ರತಿಭಟನೆ ಮಾಡಿದರು.

ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಮನುಸ್ಮೃತಿ ಪ್ರತಿಯನ್ನು ಸುಡಲು ಮುಂದಾದಾಗ ಪೊಲೀಸರು ತಡೆದರು. ಹೀಗಾಗಿ
ಹರಿದು ಹಾಕಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಯರಿಯೂರು ಮಾತನಾಡಿ, ಅಂಬೇಡ್ಕರ್ ಅವರ ಹೋರಾಟವನ್ನು ಮುಂದುವರಿಸುವ ಸಲುವಾಗಿ ಮನುಸ್ಮೃತಿ ಸುಡುವ ಪ್ರತಿಭಟನೆ ಮಾಡಲಾಗಿದ್ದು, ಶ್ರೇಣೀಕೃತ ಜಾತಿ ವ್ಯವಸ್ಥೆಗೆ ಮುನ್ನಡಿ ಬರೆದು ಭಾರತವನ್ನು ಅಂಧಕಾರಕ್ಕೆ ತಳ್ಳಿದ್ಧ ಮನುಸ್ಮೃಯನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಸುಟ್ಟು ಹಾಕಿ ೯೮ ವರ್ಷಗಳು ಆಗಿರುವುದಾಗಿ ಹೇಳಿದರು.

ಇದನ್ನು ಓದಿ: ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಜಾತಿ ಅಸಮಾನತೆ, ಲಿಂಗ ತಾರತಮ್ಯ, ಮಹಿಳೆಯರ ಮೇಲಿನ ದಬ್ಬಾಳಿಕೆ, ಬಹುಜನರ ಮೇಲೆ ದೌರ್ಜನ್ಯ, ಸತಿಸಹಗಮನ ಪದ್ಧತಿ, ಬಾಲ್ಯ ವಿವಾಹ, ಬೆತ್ತಲೆಸೇವೆ, ದೇವದಾಸಿ ಪದ್ಧತಿ, ಶೂದ್ರಾತಿಶೂದ್ರರಿಗೆ ಅಕ್ಷರ ಜ್ಞಾನ ನಿಷಿದ್ಧ ಮುಂತಾದ ಅನಿಷ್ಟ ಪದ್ಧತಿಗಳು ಶತಮಾನಗಳ ಕಾಲ ಮುಂದುವರಿಯಲು ಕಾರಣವಾದ ಮನುಸ್ಮೃತಿಯನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ೧೯೨೭ರ ಡಿ.೨೫ರಂದು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದನ್ನು ಇದೇ ವೇಳೆ ಸ್ಮರಿಸಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಕಲೀಲ್ ಉಲ್ಲಾ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ, ಕೆರೆಹಳ್ಳಿ ಬಸವರಾಜು, ಮಹಿಳಾ ಸಂಯೋಜಕಿ ಎಂ.ಆರ್.ಪ್ರಭಾವತಿ, ಜನಶಕ್ತಿ ಸುರೇಶ್, ಸಂಘಟನಾ ಸಂಚಾಲಕರಾದ ಶಿವಕುಮಾರ್, ಸಿ.ರಂಗಸ್ವಾಮಿ, ನಂಜುಂಡಸ್ವಾಮಿ, ತಾಲ್ಲೂಕು ಅಧ್ಯಕ್ಷ ರಂಗಸ್ವಾಮಿ ಮಾಡ್ರಹಳ್ಳಿ, ಶಾಂತರಾಜು, ಇದಾಯತ್ ಷರೀಫ್, ಸಾಹಿತಿ ಸಿದ್ದರಾಜು, ಆಟೋ ಉಮೇಶ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

6 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

7 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

7 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

7 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

8 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

8 hours ago