ಚಾಮರಾಜನಗರ: 76 ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಅಂಬೇಡ್ಕರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ ಪೆರೇಡ್ ಪರಿವೀಕ್ಷಣೆ ನಡೆಸಿದರು. ಪೊಲೀಸ್ ಇಲಾಖೆ, ಕೆ ಎಸ್ ಆರ್ ಪಿ ತುಕಡಿ, ಗೃಹ ರಕ್ಷಕ ದಳ, ಅಬಕಾರಿ ಇಲಾಖೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಶಾಲಾ ಕಾಲೇಜುಗಳ ಮಕ್ಕಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಚಿವರು ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯತ್ ಸಿಇಒ ಮೋನಾರೋತ್, ಎಸ್‌ಪಿ ಬಿ.ಟಿ ಕವಿತಾ ಹಾಜರಿದ್ದರು.