ಚಾಮರಾಜನಗರ

ಚಾ.ನಗರ – ಜಿಲ್ಲೆಯಲ್ಲಿ 48 ಸಾವಿರ ನಿವೇಶನ ರಹಿತರು : ಸಚಿವ ವಿಸೋಮಣ್ಣ

ಹನೂರು: ಕೈಗೊಳ್ಳಲಾಗಿರುವ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 55 ಸಾವಿರ ವಸತಿ ರಹಿತರು, 48 ಸಾವಿರ ನಿವೇಶನ ರಹಿತರು ಕಂಡು ಬಂದಿರುತ್ತಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಉತ್ತರ ನೀಡಿದ್ದಾರೆ.

ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಉತ್ತರಿಸಿದ್ದು, 2011ರಲ್ಲಿ ಎಸ್‍ಇಸಿಸಿ ಸಮೀಕ್ಷೆಯಲ್ಲಿ ಕೈಬಿಡಲಾದ ವಸತಿ ರಹಿತರ ಕುಟುಂಬಗಳನ್ನು ಗುರ್ತಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ 2018ರಲ್ಲಿ ಕೈಗೊಳ್ಳಲಾಗಿದ್ದ ಸಮೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 50,654 ವಸತಿ ರಹಿತರು ಹಾಗೂ 38,845 ನಿವೇಶನ ರಹಿತರು ಕಂಡು ಬಂದಿದ್ದಾರೆ. ಹಾಗೆಯೇ ನಗರ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೈಗೊಳ್ಳಲಾಗಿದ್ದ ಸಮೀಕ್ಷೆಯಲ್ಲಿ 5,047 ವಸತಿ ರಹಿತರು ಹಾಗೂ 10,064 ನಿವೇಶನ ರಹಿತರು ಕಂಡು ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ಸಚಿವ ಮುನಿರತ್ನ ಉತ್ತರಿಸಿದ್ದು, ಚಾ.ನಗರ ಜಿಲ್ಲೆಯಲ್ಲಿ 1,082 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದ್ದು, 346 ರೈತರಿಗೆ 42.82 ಲಕ್ಷ ರೂ ಇನ್‍ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿರುವುದಾಗಿ ಕಂದಾಯ ಇಲಾಖೆ ವರದಿ ನೀಡಿದೆ ಎಂದು ಉತ್ತರ ನೀಡಿದ್ದಾರೆ.

andolanait

Recent Posts

`ವಿದೇಶಗಳಲ್ಲಿ ಕನ್ನಡ ಕಟ್ಟುವುದು ಸವಾಲಿನ ಕೆಲಸ`

ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…

12 mins ago

ವಿಭಿನ್ನ ಓದಿಗೆ ಆಹ್ವಾನಿಸುವುದೇ ಉತ್ತಮ ಸಾಹಿತ್ಯ

`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…

23 mins ago

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

11 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

11 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

12 hours ago