ಹನೂರು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ನಿವಾಸಿಗಳಾದ ವೇಲು ಸ್ವಾಮಿ ಅಲಿಯಾಸ್ ಮೇಲು ಹಾಗೂ ಶಿವರಾಜ್ ಬಂಧಿತರು.
ಅನ್ಯ ಕಾರಣ ನಿಮಿತ್ತ ಅ.19 ರಂದು ತಮಿಳುನಾಡಿಗೆ ಹೋಗಿದ್ದ ವೇಳೆ ಮನೆಯಲ್ಲಿ ಚಿನ್ನಾಭರಣ ಸೇರಿದಂತೆ ನಗದು ಕಳ್ಳತನವಾಗಿರುವ ಬಗ್ಗೆ ಮಲ್ಲಿಗಾ ಎಂಬುವವರು ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತಂಡ ರಚಿಸಿ, ತಮಿಳುನಾಡಿನ ಸೇಲಂ, ಧರ್ಮಪುರಿ, ಬರಗೂರು, ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 100ಗ್ರಾಂ ಚಿನ್ನದ ಆಭರಣ, 6 ಸಾವಿರ ರೂ. ಮೌಲ್ಯದ ಬೆಳ್ಳಿ ಆಭರಣಗಳು ಹಾಗೂ 47000 ರೂ. ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…