ಮೈಸೂರು : 36 ಜನರ ಪ್ರಾಣಕ್ಕೆ ಎರವಾದ, ಸಂತ್ರಸ್ತ ಕುಟುಂಬಗಳ ಜೀವನಕ್ಕೆ ಕೊಡಲಿಪೆಟ್ಟು ಹಾಕಿದ ಚಾಮರಾಜನಗರ ಆಕ್ಸಿಜನ್ ದುರಂತವು ಚಲನಚಿತ್ರವಾಗುವ ಹಾದಿಯಲ್ಲಿದೆ. ಇದು ಕಮರ್ಷಿಯಲ್ ಚಿತ್ರವಾಗಿ ಬೆಳ್ಳಿತೆರೆಯ ಮೇಲೆ ಬರಲಿದೆ. ಈ ಘಟನೆ ಚಿತ್ರವಾಗುತ್ತದೆ ಎಂಬುದು ಸಾರ್ವಜನಿಕರ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಂತ್ರಸ್ತ ಕುಟುಂಬಗಳ ನೋವು ಹೇಗಿದೆ? ಆಕ್ಸಿಜನ್ ದುರಂತದಲ್ಲಿ ನಿಜವಾಗಿ ಸಾವಿಗೀಡಾದವರ ಸಂಖ್ಯೆ ಎಷ್ಟು? ಇತ್ಯಾದಿ ಅಂಶಗಳ ಬಗ್ಗೆ ಸಿನಿಮಾ ಕಥೆ ಕೇಂದ್ರೀಕರಿಸಿದೆ ಎಂಬುದು ಚಿತ್ರದ ಸ್ಕ್ರಿಪ್ಟ್ ತಯಾರಿಸಿರುವ ಚಲನಚಿನತ್ರ ನಿರ್ದೇಶಕ ಕೇಸರಿ ಹರವೂ ಅವರ ಮಾತುಗಳು.
‘ಆಂದೋಲನ’ ದಿನಪತ್ರಿಕೆಯೊಂದಿಗೆ ವಾತನಾಡಿದ ಅವರು, 2022ರಲ್ಲಿ ಚಾಮರಾಜನಗರದ ಸುತ್ತಮುತ್ತಲಿನ ಹಲವು ಹಳ್ಳಿಗಳಲ್ಲಿ ಇರುವ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಮಾಹಿತಿಗಳನ್ನು ಸಂಗ್ರಹಿಸಿದ್ದೇನೆ. ನಾಲ್ಕೂವರೆ ದಿನಗಳ ಕಾಲ ಸುತ್ತಾಟ ನಡೆಸಿ, 16 ಪುಟಗಳ ವರದಿ ಸಿದ್ಧಪಡಿಸಿದ್ದೇನೆ. ದುರಂತದಲ್ಲಿ ಮೇಲ್ನೋಟಕ್ಕೆ ಗೋಚರಿಸದ ಒಳಸುಳಿಗಳೂ ಇವೆ. ಅಂದು ಇದ್ದ ಸರ್ಕಾರದ ಬಗ್ಗೆ ವಾತನಾಡಲು ನೊಂದ ಕುಟುಂಬಗಳವರಲ್ಲಿ ಹಿಂಜರಿಕೆ ಕಂಡುಬಂದಿತ್ತು. ದುರಂತ ಕುರಿತ ಸಿನಿಮಾ ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಭೇಟಿ ನೀಡಿದ್ದೆ ಎಂದರು.
ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 3ರಿಂದ 5ರವರೆಗೆ ಆಕ್ಸಿಜನ್ ವ್ಯತ್ಯಯದಿಂದ 36 ಮಂದಿ ಅಸುನೀಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವರದಿ ನೀಡಿದೆ. ಅದು ಸರಿ. ಆದರೆ, 2021ರ ಮೇ 7ರವರೆಗೂ ಸಾವಿನ ‘ಮೆರವಣಿಗೆ’ ಮುಂದುವರಿದಿದ್ದು, ಹೆಚ್ಚುವರಿಯಾಗಿ ಇನ್ನೂ 26 ಅಮಾಯಕರು ಜೀವ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಹಾಗಾಗಿ ಹೊರಗೆ ಬಾರದಿರುವ ನೈಜ ಅಂಶಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಿನಿಮಾ ಕಥೆ ಸಾಗಲಿದೆ ಎಂದು ಹರವೂ ವಿವರಿಸಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…