ಚಾಮರಾಜನಗರ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಏಪ್ರಿಲ್ ೩ ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಈ ಬಗ್ಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧಿಕೃತ ಘೋಷಣೆ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ಹಾಗೂ ಪ್ರಚಾರದ ವೇಳಾಪಟ್ಟಿಯನ್ನು ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದಿಂದ ಬಿಡುಗಡೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿಕೆ ಶಿವಕುಮಾರ್ ಅವರು ಪೂರ್ವಾನುಮತಿ ಪಡೆದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮಾಂತರ ಜಿಲ್ಲಾ ಘಟಕ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಮರಾಜನಗರ ಮೀಸಲು ಕ್ಷೇತ್ರದಿಂದ ಸಚಿವ ಮಹದೇವಪ್ಪ ಅವರನ್ನು ಕಣಕ್ಕಿಳಿಸಲು ಹೈಕಮಾಂಡ್ ಸೂಚಿಸಿತ್ತು. ಅವರು ನಾನು ಸ್ಪರ್ಥಿಸುವುದಿಲ್ಲ.
ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ಪಟ್ಟು ಹಿಡಿದಿದ್ದರು. ಹೈಕಮಾಂಡ್ ಇದಕ್ಕೆ ಮಣಿದಿದೆ ಎನ್ನಲಾಗಿದೆ. ಸುನೀಲ್ ಬೋಸ್ ಗೆ ಟಿಕೆಟ್ ದೊರೆತಿರುವುದು ಹೈಕಮಾಂಡ್ ನಿಂದ ಅಧಿಕೃತವಾಗಿ ಪ್ರಕಟವಾಗಬೇಕಾಗಿದೆ.
ಅದಕ್ಕೂ ಮುನ್ನವೇ ಪ್ರಚಾರ ಹಾಗೂ ನಾಮಪತ್ರದ ವೇಳಾಪಟ್ಟಿ ಪ್ರಕಟ ಆಗಿರುವುದ ಕೂತುಹಲ ಮೂಡಿಸಿದೆ.
ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…
ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ…
ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್ ಗಾಂಧಿ ಹಾಗೂ ‘ಇಂಡಿಯಾ’…
ಶೆಡ್ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…
ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…
ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…