ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.
7 ಮಂದಿ ಕೈ ಕಾಲು ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್ ಸಮೀಪ ಬಸ್‌ಗಾಗಿ ಕಾಯುತ್ತಾ ನಿಂತಿದ್ದವರ ಹಾಗೂ ಪಾದಾಚಾರಿಗಳ ಮೇಲೆ ಹುಚ್ಚು ನಾಯಿ ಎಗರಿಬಿದ್ದಿದೆ.
ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಗಾಯಗೊಂಡವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ.





