ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪಾಠ ಕೇಳುತ್ತಿದ್ದ ವೇಳೆಯೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮನೋಜ್ ಕುಮಾರ್ ಎಂಬಾತನೇ ಹೃದಯಾಘಾತದಿಂದ ಮೃತಪಟ್ಟ ಬಾಲಕನಾಗಿದ್ದಾನೆ.
ಹೃದಯಸಂಬಂಧಿ ಖಾಯಿಲೆಗಳಿಂದ ಬಳಲುತ್ತಿದ್ದ ಮನೋಜ್‌ಗೆ ಶಾಲೆಯಲ್ಲಿ ಪಾಠ ಕೇಳುವಾಗ ಹೃದಯಾಘಾತವಾಗಿದೆ. ತಕ್ಷಣ ಮನೋಜ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆ ಮನೋಜ್ ಕುಮಾರ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.





