ಚಾಮರಾಜನಗರ: ಜಿಲ್ಲೆಯ ಇದೇ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಈಚರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಬೈಕ್‌ಗೆ ಈಚರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ದುರ್ಮರಣವನ್ನು ಹೊಂದಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳನ್ನು ಬ್ಯಾಡಮೂಡ್ಲು ಗ್ರಾಮದ ಅಭಿ(22) ಮತ್ತು ಅಭಿಷೇಕ್ (24) ಎಂದು ಗುರುತಿಸಲಾಗಿದೆ.
ಬಾಳೆಗೊನೆ ಕಡಿಯುವ ಕೆಲಸಗಾರರು ಇವರಾಗಿದ್ದು ಕೆಲಸ ಮುಗಿಸಿ ಹಿಂತಿರುಗುವಾಗ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮಾದೇಶ್ ಎಂಬಾತನ ಸ್ಥಿತಿ ಗಂಭೀರವಾಗಿರುವುದರಿಂದ ಈತನನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇನ್ನು ಈ ಅಪಘಾತ ಬಗ್ಗೆ ಪ್ರಕರಣ ದಾಖಲಾಗಿದ್ದು, ಅಪಘಾತದ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…