ಚಾಮರಾಜನಗರ

ಚಾಮರಾಜನಗರ: ಪೊಲೀಸರಿಂದ ತಪ್ಪಿಸಕೊಂಡಿದ್ದ ವಿಚಾರಣಾ ಖೈದಿ ಬಂಧನ

ಚಾಮರಾಜನಗರ : ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ.

ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೆ ಪೊಲೀಸರಿಗೆ ಬಲೆಗೆ ಬಿದ್ದಿದ್ದಾನೆ.

ಘಟನೆ ವಿವರ : ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್​​ ​ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ತಮಿಳುನಾಡು ಸತ್ಯಮಂಗಲಂನ ನ್ಯಾಯಾಲಯಕ್ಕೆ ಶುಕ್ರವಾರ ವಿಚಾರಣೆಗೆ ಕರೆದೊಯ್ಯುವಾಗ ಹಾಸನೂರಿನ ಹೋಟೆಲ್​ ಬಳಿ ಪೊಲೀಸರನ್ನು ನೂಕಿ ಪರಾರಿಯಾಗಿದ್ದನು. ಆ ವೇಳೆ, ಪೊಲೀಸ್ ಸಿಬ್ಬಂದಿಗಳಾದ ಶಿವಾಜಿ ಅವರ ಕಿರುಬೆರಳು ಮುರಿದು, ಕಾಲುಗಳಿಗೆ ಗಾಯವಾಗಿತ್ತು. ವೀರಭದ್ರ ಎಂಬವರಿಗೆ ತರಚಿದ ಗಾಯಗಳಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡ ಈತ ಪೊದೆಗಳ ಒಳಕ್ಕೆ ನುಗ್ಗಿ ಕಣ್ತಪ್ಪಿಸಿಕೊಂಡಿದ್ದ ಎನ್ನಲಾಗಿದೆ.

ರೈಲಿನಲ್ಲಿ ಬಲೆಗೆ ಬಿದ್ದ ಕೈದಿ : ಕೈಗೆ ಹಾಕಲಾಗಿದ್ದ ಬೇಡಿಯನ್ನು ಕಲ್ಲಿನಿಂದ ಜಜ್ಜಿಕೊಂಡು ಬೇಡಿ ಕಳಚಿಕೊಂಡು, ಹಾಕಿದ್ದ ಬಿಳಿ ಬಟ್ಟೆಯನ್ನು ಕಳಚಿ ಚಾಮರಾಜನಗರಕ್ಕೆ ಬಂದಿದ್ದಾನೆ ಎನ್ನಲಾಗಿದೆ.

ಚಾಮರಾಜನಗರದಿಂದ ನಂಜನಗೂಡಿಗೆ ನಿನ್ನೆ ರಾತ್ರಿ ರೈಲಿನಲ್ಲಿ ಹೋಗಿದ್ದ ಈತ, ಇಂದು ನಂಜನಗೂಡಿನಿಂದ ವಾಪಸ್ ಚಾಮರಾಜನಗರಕ್ಕೆ ಬರುವಾಗ ಮಹಿಳಾ ಬೋಗಿಯನ್ನು ಏರಿ ಪರ್ಸ್ ಕದಿಯಲು ಯತ್ನಿಸಿದಾಗ ಅಲ್ಲೇ ಇದ್ದ ಸಹ ಪ್ರಯಾಣಿಕರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ನಾಪತ್ತೆಯಾಗಿದ್ದ ಕೈದಿಯ ಪ್ರಕರಣ ಸುಖಾಂತ್ಯಗೊಂಡಿದ್ದು, ಚಾಮರಾಜನಗರ ಗ್ರಾಮಾಂತರ ಠಾಣಾ ಪೊಲೀಸರು ಸುರೇಶ್​ನ ಆರೋಗ್ಯ ತಪಾಸಣೆಗೊಳಿಸಿ ಸತ್ಯಮಂಗಲಂ ನ್ಯಾಯಾಲಯ ವಶಕ್ಕೆ ಕೊಡಲು ತೆರಳಿದ್ದಾರೆ.

ಇಬ್ಬರು ಪೊಲೀಸರಿಗೆ ಅಮಾನತು ಶಿಕ್ಷೆ : ವಿಚಾರಣಾ ಕೈದಿ ತಪ್ಪಿಸಿಕೊಂಡಿದ್ದ ಹಿನ್ನೆಲೆ ಮೀಸಲು ಪಡೆಯ ವೀರಭದ್ರ ಹಾಗೂ ಶಿವಾಜಿ ಎಂಬವರನ್ನು ಅಮಾನತುಗೊಳಿಸಿ ಚಾಮರಾಜನಗರ ಎಸ್ಪಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಇಬ್ಬರ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಸೂಚಿಸಿದ್ದಾರೆ.

ಆರೋಪಿತನ ವಿರುದ್ಧ ದಾಖಲಾಗಿರುವ ಪ್ರಕರಣಗಳು : ಬಂಧಿತ ಆರೋಪಿ ದೇವಾಲಯ ಹುಂಡಿ ಕಳವು, ದರೋಡೆ ಸೇರಿದಂತೆ ಚಾಮರಾಜನಗರ ಗ್ರಾಮಾಂತರ ಠಾಣೆ, ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಅದೇ ರೀತಿ, ತಮಿಳುನಾಡಿನ ಈರೋಡ್ ಜಿಲ್ಲಾ ವ್ಯಾಪ್ತಿಯಲ್ಲೂ ಈತನ ವಿರುದ್ಧ ಕಳವು ಪ್ರಕರಣಗಳು ದಾಖಲಾಗಿವೆ.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

2 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

2 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

3 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

4 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

4 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

4 hours ago