ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ.
ಮೈಸೂರಿನ ರಮಾಬಾಯಿ ನಗರದ ಜೀವನ್ ಹಾಗೂ ನಂದನ್ (ಇಬ್ಬರಿಗೂ 24 ವರ್ಷ) ಸ್ಥಳ ದಲ್ಲೇ ಮೃತಪಟ್ಟಿದ್ದಾರೆ.
ಉಳಿದಂತೆ ರಮಾಬಾಯಿನಗರದ ಶಶಾಂಕ್, ವಿದ್ಯಾರಣ್ಯಪುರಂನ ಧನುಷ್, ಗುಂಡ್ಲುಪೇಟೆಯ ಸುನೀಲ್ ಕುಮಾರ್ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರೆಲ್ಲ ಚಾಮರಾಜನಗರ ತಾಲೂಕಿನ ಬೆಜ್ಜಲಪಾಳ್ಯದಲ್ಲಿ ಇಂದು ನಡೆಯುತ್ತಿದ್ದ ಮದುವೆಗೆ ಮೈಸೂರಿನಿಂದ ಆಗಮಿಸಿದ್ದರು. ತಡ ರಾತ್ರಿ ಮದುವೆ ಮನೆಯಿಂದ ಪುಣಜನೂರಿಗೆ ತೆರಳಿ, ವಾಪಸ್ ಮದುವೆ ಮನೆಗೆ ಬರುವಾಗ ಅಪಘಾತ ನಡೆದಿದೆ.
ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಸ್ಪಿ ಡಾ. ಬಿ ಟಿ ಕವಿತಾ, ಎಎಸ್ಪಿ ಶಶಿಧರ್, ಡಿಎಸ್ಪಿ ಲಕ್ಷ್ಮಯ್ಯ, ಇನ್ಸ್ ಪೆಕ್ಟರ್ ನವೀನ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…
ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…
ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್ ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…