ಚಾಮರಾಜನಗರ: ಆಷಾಢ ಮಾಸದಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವ ಚಾಮರಾಜೇಶ್ವರ ರಥೋತ್ಸವ ಇಂದು ಅದ್ಧೂರಿಯಾಗು ಜರುಗಿತು.
ಶ್ರೀ ಚಾಮರಾಜೇಶ್ವರ ಬ್ರಹ್ಮರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವ ಆರಂಭವಾಯಿತು. ಮಧ್ಯಾಹ್ನದ ವೇಳೆಗೆ ಸಲ್ಲುವ ಶುಭ ಲಗ್ನದಲ್ಲಿ ರಥೋತ್ಸವ ಜರುಗಿತು. ರಥೋತ್ಸವವ ಮೆರವಣಿಗೆ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಮತ್ತೆ ದೇವಾಲಯದ ಆವರಣಕ್ಕೆ ಆಗಮಿಸಿತು.
ರಥೋತ್ಸವಕ್ಕೆ ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ನವಜೋಡಿಗಳು ರಥೋತ್ಸವಕ್ಕೆ ಹಣ್ಣು ಜವನ ಎಸೆದು ಚಾಮರಾಜೇಶ್ವರನ ಆಶೀರ್ವಾದ ಪಡೆದು ಪುನೀತರಾದರು.
ಇನ್ನೂ ರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಲವಾರು ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.