ಬೆಂಗಳೂರು : ಚಾಮಾರಾಜನಗರ ಕೈ ಅಭ್ಯರ್ಥಿ ಬಗ್ಗೆ ಅಂತಿಮವಾಗಿ ಹೈಕಮ್ಯಾಂಡ್ ತೀರ್ಮಾನ ಮಾಡುತ್ತಾರೆ ಎಂದು ಹೆಚ್.ಸಿ.ಮಹದೇವಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುನಿಲ್ಚಾ ಬೋಸ್‌ರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡುವ ಬಗ್ಗೆ ಹೈಕಮ್ಯಾಂಡ್ ತೀರ್ಮಾನವೇ ಅಂತಿಮ ಎಂದರು.
ಸುನಿಲ್ ಬೋಸ್‌ಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ಶಾಸಕರು, ಮುಖಂಡರು ಹಾಗೂ ಕೇಂದ್ರದಿಂದ ನಿಯೋಜನೆ ಮಾಡಿರುವ ಅಬ್ಸರ್ವರ್ಸ್ ಎಲ್ಲರೂ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಎಲ್ಲವನ್ನೂ ಕೂಡಿಕರಿಸಿ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ ಎಂದರು.
ಎಲ್ಲವನ್ನು ಅಳೆದು ತೂಗಿ ಇಂದು ಸಂಜೆ ವೇಳೆಗೆ ಅಭ್ಯರ್ಥಿಯ ಹೆಸರನ್ನು ಅಂತಿಮ ಮಾಡಲಾಗುತ್ತದೆ ಎಂದು ತಿಳಿಸಿದರು.