malemahadeshwara hills
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ.
ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು, ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಿವೆ.
ಅಕ್ಟೋಬರ್.19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ ವಿಶೇಷ ಸೇವೆ, ಉತ್ಸವಾದಿಗಳು ನಡೆಯಲಿವೆ. ಅಕ್ಟೋಬರ್.20ರಂದು ನರಕ ಚತುರ್ದಶಿ, ವಿಶೇಷ ಸೇವೆ ಹಾಗೂ ಉತ್ಸವಾದಿಗಳು, ಅಕ್ಟೋಬರ್.21ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಬೆಳಿಗ್ಗೆಯಿಂದಲೇ ಹಾಲರವಿ ಸೇವೆ ಸೇರಿದಂತೆ ವಿಶೇಷ ಸೇವೆ ಮತ್ತು ಉತ್ಸವಾದಿಗಳು ನಡೆಯಲಿವೆ.
ಇದನ್ನು ಓದಿ : ಚಾಮರಾಜನಗರ| ದೀಪಾವಳಿ ಜಾತ್ರೆಗೆ ಸಜ್ಜಾಗುತ್ತಿರುವ ಮಲೆ ಮಹದೇಶ್ವರ ಬೆಟ್ಟ
ಅಕ್ಟೋಬರ್.22ರಂದು ಬೆಳಿಗ್ಗೆ 9.15ರಿಂದ 9.55ರವರೆಗೆ ದೀಪಾವಳಿ ಮಹಾರಥೋತ್ಸವ ನಡೆಯಲಿದೆ. ಅಕ್ಟೋಬರ್.27ರಂದು ಕಾರ್ತಿಕ ಸೋಮವಾರ ಜಾತ್ರಾ ಮಹೋತ್ಸವ ಆರಂಭವಾಗಲಿವೆ.
ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಸಾರ್ವಜನಿಕರು ಆಗಮಿಸುತ್ತಿದ್ದು, ಇದಕ್ಕಾಗಿ ಬೆಟ್ಟದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇನ್ನು ಕರ್ನಾಟಕ ಮಾತ್ರವಲ್ಲದೇ ನೆರೆಯ ರಾಜ್ಯಗಳಿಂದಲೂ ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಬರುವುದರಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ತಮಿಳುನಾಡಿನಿಂದ 150, ಕೆಎಸ್‌ಆರ್‌ಟಿಸಿಯಿಂದ 300ಕ್ಕೂ ಹೆಚ್ಚು ಬಸ್‌ಗಳು ರಾಜ್ಯದ ಹಲವೆಡೆಯಿಂದ ಸಂಚಾರ ಮಾಡಲಿವೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…