Mysore
17
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಚಾಮರಾಜನಗರ| ಕಾಡಾನೆ ದಾಳಿಗೆ ರೈತ ಬಲಿ

Chamarajanagar elephant killed farmer

ಚಾಮರಾಜನಗರ: ಜಮೀನಿಗೆ ತೆರಳಿದ ವೇಳೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ.

ನಂಜಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿಗೆ ತೆರಳಿದ ವೇಳೆ ಅಠಾತ್‌ ಕಾಡಾನೆ ದಾಳಿ ನಡೆಸಿದ ಪರಿಣಾಮ ನಂಜಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ:- ಹನೂರು| ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಅತ್ಮಹತ್ಯೆ

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಸಮರ್ಪಕ ಆನೆ ಕಂದಕಗಳು, ಸೋಲಾರ್‌ ಬೇಲಿ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:- ನಂಜನಗೂಡಿನಲ್ಲಿ ಸುರಿದ ಧಾರಾಕಾರ ಮಳೆ: ಧರೆಗುರುಳಿದ ಬೃಹತ್‌ ಗಾತ್ರದ ಮರಗಳು 

Tags:
error: Content is protected !!