Chamarajanagar elephant killed farmer
ಚಾಮರಾಜನಗರ: ಜಮೀನಿಗೆ ತೆರಳಿದ ವೇಳೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ.
ನಂಜಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿಗೆ ತೆರಳಿದ ವೇಳೆ ಅಠಾತ್ ಕಾಡಾನೆ ದಾಳಿ ನಡೆಸಿದ ಪರಿಣಾಮ ನಂಜಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಇದನ್ನೂ ಓದಿ:- ಹನೂರು| ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಅತ್ಮಹತ್ಯೆ
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಸಮರ್ಪಕ ಆನೆ ಕಂದಕಗಳು, ಸೋಲಾರ್ ಬೇಲಿ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:- ನಂಜನಗೂಡಿನಲ್ಲಿ ಸುರಿದ ಧಾರಾಕಾರ ಮಳೆ: ಧರೆಗುರುಳಿದ ಬೃಹತ್ ಗಾತ್ರದ ಮರಗಳು
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…