ಚಾಮರಾಜನಗರ

ಚಾಮರಾಜನಗರ| ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಜನ

ಚಾಮರಾಜನಗರ: ಹುಲಿ, ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿಯಿಂದ ಭಯಭೀತರಾಗಿರುವ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿ ಬಿಸಿ ಮುಟ್ಟಿಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ.

ಕಳೆದ ಒಂದು ತಿಂಗಳಿನಿಂದಲೂ ಈ ಭಾಗದಲ್ಲಿ ಹುಲಿ ಸಂಚಾರ ಮಾಡುತ್ತಿದ್ದು, ಜಮೀನುಗಳಿಗೆ ತೆರಳಲು ಗ್ರಾಮಸ್ಥರು ಭಯಪಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಒತ್ತಡದ ಮೇರೆಗೆ ಅರಣ್ಯ ಇಲಾಖೆ ಬೋನು ಅಳವಡಿಸಿತ್ತು. ಆದರೆ ಹುಲಿ ಮಾತ್ರ ಇದುವರೆಗೂ ಬೋನಿಗೆ ಬಿದ್ದಿರಲಿಲ್ಲ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತೊಂದು ಸ್ಥಳದಲ್ಲಿ ಬೋನು ಅಳವಡಿಸಿ ಹುಲಿ ಸೆರೆಗೆ ಮುಂದಾಗಿರಲಿಲ್ಲ.

ಹುಲಿ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಭಯಭೀತರಾಗಿದ್ದ ಗ್ರಾಮಸ್ಥರು, ಇಂದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದಾಗ ಬೋನಿನ ಒಳಗಡೆ ಕೂಡಿಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

4 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

4 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

4 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

4 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

4 hours ago