ಚಾಮರಾಜನಗರ

ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆ: ಸಿದ್ದರಾಮಯ್ಯ

ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಶನಿವಾರ (ಆ.10) ಆಯೋಜಿಸಿದ್ದ ‘ಚೆಲುವ ಚಾಮರಾಜನಗರ’ “ಭರಚುಕ್ಕಿ ಜಲಪಾತೋತ್ಸವ” ವನ್ನು ಉದ್ಘಾಟಿಸಿ ಮಾತನಾಡಿದರು.

ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ ಎಂದರು.

ಈ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗ್ತದೆ ಎನ್ನುವ ಮೂಢನಂಬಿಕೆ ಬಿತ್ತಿದ್ದರು. ಆದರೂ ನಾನು ಹತ್ತಕ್ಕೂ ಹೆಚ್ವು ಬಾರಿ ಜಿಲ್ಲೆಗೆ ಮುಖ್ಯಮಂತ್ರಿಯಾಗಿ ಬಂದಿದ್ದೇನೆ. ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದರು.

ನನ್ನ ಕುರ್ಚಿಯನ್ನು ಬಿಜೆಪಿ-ಜೆಡಿಎಸ್ ನವರು ಅಲ್ಲಾಡಿಸ್ತಾನೇ ಇದಾರೆ. ಅವರು ಎಷ್ಟೇ ಅಲ್ಲಾಡಿಸಿದ್ರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರ್ತೇನೆ ಎಂದು ಬಿಜೆಪಿ-ಜೆಡಿಎಸ್ ಅವರ ಜಂಟಿ ಷಡ್ಯಂತ್ರವನ್ನು ಲೇವಡಿ ಮಾಡಿದರು.

ಸಿದ್ದರಾಮಯ್ಯರ ಕಾಲುಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಉತ್ತಮ ಮಳೆಯಾಗಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ ಎಂದರು.

ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಅಗತ್ಯ ಎಲ್ಲ ನೆರವನ್ನೂ ನೀಡಲಿದೆ. ಅಗತ್ಯಬಿದ್ದರೆ ಹೊಸ ಪ್ರವಾಸೋಧ್ಯಮ ನೀತಿಯನ್ನೂ ರಚಿಸಲಾಗುವುದು ಭರವಸೆ ನೀಡಿದರು.

ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುಬರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜೊತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕವಾಗಿ ವೇಗದ ಪ್ರಗತಿ ಕಾಣಿಸಲು ಎಲ್ಲಾ ಸಹಕಾರವನ್ನೂ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಸಚಿವರಾದ ಎಚ್.ಕೆ.ಪಾಟೀಲ್, ಕೆ.ವೆಂಕಟೇಶ್, ಶಿವರಾಜ ತಂಗಡಗಿ, ಶಾಸಕರಾದ ಹನೂರು ಮಂಜುನಾಥ್, ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ಸಂಸದರಾದ ಸುನಿಲ್ ಬೋಸ್, ವಿಧಾನ‌ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

3 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

3 hours ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

3 hours ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

3 hours ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

3 hours ago