ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ
ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ ಕೊರತೆ ಹಿನ್ನೆಲೆಯಲ್ಲಿ ನಗರದ ಮಕಾವ್ ಹೋಟೆಲ್, ಉಡುಪಿ ಗ್ರಾಂಡ್ ರೆಸ್ಟೋರೆಂಟ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಆದೇಶಿಸಲಾಗಿದೆ.
ಜಿಲ್ಲಾಧಿಕಾರಿ ಶ್ರೀರೂಪ, ಆಹಾರ ಸುರಕ್ಷತಾ ಅಧಿಕಾರಿಯೂ ಆಗಿರುವ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರು ನಗರದ ಹೊರವಲಯದಲ್ಲಿರುವ ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ಉತ್ಪಾದನಾ ಘಟಕಗಳಿಗೆ ಸೋಮವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಹೋಟೆಲ್ ಮಕಾವ್ ಹಾಗೂ ಉಡುಪಿ ಗ್ರಾಂಡ್ ರೆಸ್ಟೋರೆಂಟ್ ನಲ್ಲಿ ದಾಸ್ತಾನು ಮಾಡಲಾಗಿದ್ದ ದಿನಸಿ ಪದಾರ್ಥಗಳು, ತರಕಾರಿ, ಇನ್ನಿತರ ಸಾಮಾಗ್ರಿಗಳನ್ನು ವೀಕ್ಷಿಸಿದ ವೇಳೆ ಆಹಾರದಲ್ಲಿ ಕೃತಕ ಬಣ್ಣ ಮಿಶ್ರ ಮಾಡಿರುವುದು, ಅಡುಗೆ ಮನೆಯಲ್ಲಿ ಸ್ವಚ್ಚತೆ ಇಲ್ಲದಿರುವುದು ಹಾಗೂ ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟವಿಲ್ಲದ ದಿನಸಿ ಸಾಮಗ್ರಿಗಳು ಕಂಡುಬಂದವು. ಹಾಗೆಯೇ,ಹೋಟೆಲ್ ಮಕಾವ್ ನಲ್ಲಿ ತಾಜಾ ಅಲ್ಲದ ಮಾಂಸ, ಮಶ್ರೂಮ್ ಗಳನ್ನು ರೆಫ್ರಿಜರೇಟರ್ ನಲ್ಲಿ ಇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ.
ನಂಜನಗೂಡು ಮುಖ್ಯ ರಸ್ತೆಯ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಕಾರ್ಖಾನೆ ಹಾಗೂ ಕಲರ್ ಟೋನ್ ಉದ್ಯಮದಲ್ಲಿನ ಕಾರ್ಮಿಕರು ಮತ್ತು ಸಿಬ್ಬಂದಿಗಾಗಿ ತಯಾರಿಸಲಾದ ಆಹಾರ ಮತ್ತು ಅದರ ಗುಣಮಟ್ಟವನ್ನು ಸಹ ವೀಕ್ಷಿಸಿದರು. ಇಲ್ಲಿಯೂ ಊಟ ,ಉಪಹಾರ ಇನ್ನಿತರ ತಿನಿಸುಗಳ ತಯಾರಿಕೆಗಾಗಿ ಸಂಗ್ರಹಿಸಲಾಗಿದ್ದ ದಿನಸಿ ಪದಾರ್ಥಗಳನ್ನು ಪರಿಶೀಲಿಸಿದರು. ಗುಣಮಟ್ಟ ಕಾಪಾಡಿಕೊಳ್ಳಬೇಕು. ಸ್ವಚ್ಚತೆ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಬದನಗುಪ್ಪೆ ಮುಖ್ಯ ರಸ್ತೆಯಲ್ಲಿರುವ ರಾಜಸ್ಥಾನಿ ಹೋಟೆಲ್‍ಗೆ ಭೇಟಿ ನೀಡಿ ಅಡುಗೆ ಮನೆ ,ಆಹಾರ ಧಾನ್ಯಗಳ ಸಂಗ್ರಹಣೆ ಹಾಗೂ ಆಹಾರ ಸುರಕ್ಷತೆಗೆ ವಹಿಸಿರುವ ಕ್ರಮಗಳನ್ನು ಪರಿಶೀಲಿಸಿದರು. ಹೋಟೆಲ್‍ನಲ್ಲಿ ಸ್ವಚ್ಚತೆ ಇರಬೇಕು. ಬೇಕರಿಗಳಲ್ಲಿ ತಾಜಾ ಹಾಗೂ ಬಿಸಿಯಾಗಿ ತಯಾರಿಸಿದ ತಿನಿಸುಗಳನ್ನು ಮಾರಾಟ ಮಾಡಬೇಕು ಎಂದು ತಾಕೀತು ಮಾಡಿದರು.
ವಿವಿಧ ರೆಸ್ಟೋರೆಂಟ್ ಹೋಟೆಲ್‍ಗಳಿಗೆ ಭೇಟಿ ನೀಡಿ ವ್ಯಾಪಕವಾಗಿ ಪರಿಶೀಲಿಸಿದರು. ಈ ವೇಳೆ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…