ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ತಯಾರಿ ನಡೆಸಲಾಗುತ್ತಿದೆ.
ಅಕ್ಟೋಬರ್.18ರಿಂದ ದೀಪಾವಳಿ ಜಾತ್ರೆ ಆರಂಭವಾಗಲಿದ್ದು, ಅಂದು ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ.
ಅಕ್ಟೋಬರ್.19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ ವಿಶೇಷ ಸೇವೆ, ಉತ್ಸವಾದಿಗಳು ನಡೆಯಲಿವೆ. ಅಕ್ಟೋಬರ್.20ರಂದು ನರಕ ಚತುರ್ದಶಿ, ವಿಶೇಷ ಸೇವೆ ಹಾಗೂ ಉತ್ಸವಾದಿಗಳು, ಅಕ್ಟೋಬರ್.21ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಬೆಳಿಗ್ಗೆಯಿಂದಲೇ ಹಾಲರವಿ ಸೇವೆ ಸೇರಿದಂತೆ ವಿಶೇಷ ಸೇವೆ ಮತ್ತು ಉತ್ಸವಾದಿಗಳು ನಡೆಯಲಿವೆ.
ಇದನ್ನೂ ಓದಿ:-ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್
ಅಕ್ಟೋಬರ್.22ರಂದು ಬೆಳಿಗ್ಗೆ 9.15ರಿಂದ 9.55ರವರೆಗೆ ದೀಪಾವಳಿ ಮಹಾರಥೋತ್ಸವ ನಡೆಯಲಿದೆ. ಅಕ್ಟೋಬರ್.27ರಂದು ಕಾರ್ತಿಕ ಸೋಮವಾರ ಜಾತ್ರಾ ಮಹೋತ್ಸವ ಆರಂಭವಾಗಲಿವೆ.
ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದಾರೆ. ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಸಾರ್ವಜನಿಕರು ಆಗಮಿಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.





